Thursday, August 11, 2022

Latest Posts

ಕಮರಿಗೆ ಉರುಳಿದ ಮಿನಿ ಬಸ್: 8 ಮಂದಿ ಸಾವು, ಹಲವರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು- ಕಾಶ್ಮೀರದಲ್ಲಿ ಮಿನಿ ಬಸ್ ಒಂದು ಕಮರಿಗೆ ಉರುಳಿ ಬಿದ್ದಿದ್ದು, ಇದರ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ದೋಡಾದ ಥಾತ್ರಿ ಬಳಿ ಈ ಅಪಘಾತ ಸಂಭವಿಸಿದ್ದು, ಬಸ್‌ ತತ್ರಿಯಿಂದ ದೋಡಾಕ್ಕೆ ತೆರಳುತ್ತಿತ್ತೆಂದು ತಿಳಿದು ಬಂದಿದೆ.

ಈ ಬಗ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದು, ಡಿ.ಸಿ. ದೊಡಾ ವಿಕಾಸ್ ಶರ್ಮಾ ಅವರೊಂದಿಗೆ ಮಾತನಾಡಿ ಗಾಯಾಳುಗಳನ್ನು ಜಿಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದ್ದು, ಸಾವಿನ ಸಂಖ್ಯೆ  ಹೆಚ್ಚಳವಾಗುವ ಸಾಧ್ಯತೆಯಿದೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss