ಮದುವೆ ಮುಗಿಸಿಕೊಂಡು ವಾಪಸಾಗುತ್ತಿದ್ದ ಮಿನಿ ಬಸ್ ಪಲ್ಟಿ: 30 ಜನರಿಗೆ ಗಾಯ

ಹಾವೇರಿ: ತಾಲೂಕಿನ ಕರಜಗಿ ಗ್ರಾಮದಲ್ಲಿ ಸೋಮವಾರ ನಡೆದ ಮದುವೆ ಮುಗಿಸಿಕೊಂಡು ವಾಪಸಾಗುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ.
ಹಾವೇರಿ ನಗರದ ಹೊರವಲಯವಾದ ದೇವಗಿರಿ ಬಳಿ ಈ ಘಟನೆ ನಡೆದಿದ್ದು, ರಸ್ತೆ ಬದಿಗೆ ಮಿನಿ ಬಸ್ ಉರುಳಿದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಬಹುತೇಕ ಜನರು ಗಾಯಗೊಂಡಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಸುಮಾರು 5 ಜನರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ಹಾಗೂ ಉಳಿದ ಜನರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!