ಮಿನಿ ಗೂಡ್ಸ್ ವಾಹನ ಪಲ್ಟಿ: ಐವರ ದುರ್ಮರಣ, ಹತ್ತಾರು ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಪಿಕಪ್ ವಾಹನ ಪಲ್ಟಿಯಾಗಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ್ವರ್ ನಾಗ್ ಪ್ರಕಾರ, ಜಗದಲ್‌ಪುರದ ದರ್ಭಾ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಮೇಟಾ ಗ್ರಾಮದ ಬಳಿ ಸುಮಾರು 45 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಸಿಆರ್‌ಪಿಎಫ್ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ವೈದ್ಯಾಧಿಕಾರಿ ದಿಲೀಪ್ ಕಶ್ಯಪ್ ಮಾತನಾಡಿ, ‘ಅಪಘಾತದ ಬಗ್ಗೆ ಸಂಜೆ 4:30ರ ಸುಮಾರಿಗೆ ನಮಗೆ ಮಾಹಿತಿ ಸಿಕ್ಕಿತು. ಇದುವರೆಗೆ ಸುಮಾರು 30 ಮಂದಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 81 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!