ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪೊನ್ನಂಪೇಟೆಯಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ: ಕೆ.ಜಿ.ಬೋಪಯ್ಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಪೊನ್ನಂಪೇಟೆ ತಾಲೂಕು ಕಚೇರಿ ಆಡಳಿತ ನಿರ್ವಹಣೆಗಾಗಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣದ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಅನುದಾನ ಘೋಷಣೆಯಾಗಲಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದರು.
ಬಾಳೆಲೆಯಲ್ಲಿ 18 ಲಕ್ಷ ರೂ.ಚ್ಚದಲ್ಲಿ ನಿರ್ಮಾಣವಾದ ಕಂದಾಯ ಇಲಾಖೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಪೊನ್ನಂಪೇಟೆ ತಾಲೂಕು ಘೋಷಣೆಯಾದ ಬಳಿಕ ಹೋಬಳಿಯಲ್ಲಿ ನೂತನ ನಾಡ ಕಚೇರಿ ಕಟ್ಟಡವನ್ನು ಉದ್ಘಾಟಿಸಲಾಗುತ್ತಿದೆ. ಶ್ರೀಮಂಗಲ ಮತ್ತು ಹುದಿಕೇರಿ ಹೋಬಳಿಯಲ್ಲಿಯೂ ನಾಡಕಚೇರಿ ಕಟ್ಟಡಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ತಾಲೂಕಿ  ಘೋಷಣೆಯಾದ ತಕ್ಷಣವೇ ಎಲ್ಲಾ ವ್ಯವಸ್ಥೆ ಸರಿದೂಗಿಸಲು ಸಾಧ್ಯವಿಲ್ಲ. ಹಂತ ಹಂತವಾಗಿ ಕಾರ್ಯನಿರ್ವಹಿಸಲು ಇಲಾಖೆಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು‌ ನುಡಿದರು. ತಹಶೀಲ್ದಾರ್ ಯೋಗಾನಂದ ಮಾತನಾಡಿ, ಕಂದಾಯ ಇಲಾಖೆ ನೌಕರರು ಜನರ ಸಮಸ್ಯೆಗಳಿಗೆ  ಸ್ಪಂದಿಸಿ ಕೆಲಸ ನಿರ್ವಹಿಸಬೇಕು. ಇಲಾಖೆಯಲ್ಲಿ ಯಾವುದೇ ಆರೋಪಗಳು ಬರದಂತೆ ನೋಡಿಕೊಳ್ಳಬೇಕು. ಇಲಾಖೆ ಬಗ್ಗೆ ಜನರ ವಿಶ್ವಾಸ ಹೆಚ್ಚಿಸಬೇಕು ಎಂದು ಹೇಳಿದರು.
ಬಾಳೆಲೆ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಮಾತನಾಡಿ,  ಹಲವು ವಿರೋಧಗಳ ನಡುವೆಯೂ ನಾಡಕಚೇರಿ ನೂತನ ಕಟ್ಟಡ ನಿರ್ಮಾಣಗೊಂಡಿರುವುದು ಸಂತೋಷ.ನಾಡ ಕಚೇರಿ ಸುತ್ತಮುತ್ತಲಿನ ಜನತೆಗೆ ಅನುಕೂಲಕರವಾಗಿ ಕೆಲಸ ನಿರ್ವಹಿಸುವಂತಾಗಲಿ ಎಂದು ಆಶಿಸಿದರು.
ಜಿ.ಪಂ.‌ಮಾಜಿ ಸದಸ್ಯ ಬಾನಂಡ ಪೃಥ್ಯು ಮಾತನಾಡಿದರು. ಮತ್ತೋರ್ವ ಮಾಜಿ ಸದಸ್ಯ ಮುಕೊಂಡ ಶಶಿ ಸುಬ್ರಮಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪೊಡಮಾಡ ಸುಖೇಶ್, ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ, ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೀಯಕ್ ಪೂವಂಡ ಪ್ರಭಾ, ಮುಖಂಡರಾದ ಸುನಿತಾ, ಆರ್‌ಎಂಸಿ ನಿರ್ದೇಶಕರಾದ ಮಾಚಂಗಡ ಸುಜಾ ಪೂಣಚ್ಚ, ಆದೇಂಗಡ ವಿನು ಚಂಗಪ್ಪ, ಉಪ ತಹಶೀಲ್ದಾರ್ ಅಕ್ಕಮ್ಮ, ಶಿರಸ್ತೇದಾರ್‌ ರಾಧಾಕೃಷ್ಣ, ಕಂದಾಯ ಪರಿವೀಕ್ಷಕ ಸಮಿವುಲ್ಲಾ ಶರೀಫ್, ಗ್ರಾಮ ಲೆಕ್ಕಿಗ ಚಂದ್ರಪ್ರಸಾದ್, ಸಹಾಯಕ ಸೋಮಯ್ಯ, ಗಣೇಶ್, ಅನಿತಾ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss