ರಾಷ್ಟ್ರ ರಾಜಧಾನಿಯಲ್ಲಿ ಕನಿಷ್ಠ ತಾಪಮಾನ: ಹೆಚ್ಚುತ್ತಿದೆ ಶೀತಗಾಳಿ, ಚಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಷ್ಟ್ರ ರಾಜಧಾನಿ ದೆಹಲಿ ಸಹಿತ ಉತ್ತರ ಭಾರತ, ವಾಯವ್ಯ ಭಾರತದ ಶೀತಗಾಳಿ ಹೆಚ್ಚಾಗಿದ್ದು, ದೆಹಲಿಯಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದೆಹಲಿಯಲ್ಲಿ ದಟ್ಟ ಮಂಜು ಕವಿದಿರುವ ವಾತಾವರಣ ಇದ್ದು, ಸೋಮವಾರ ಬೆಳಗ್ಗೆ ದೆಹಲಿಯ ಆಯಾನಗರ, ಲೋಧಿ ರಸ್ತೆ, ಸಫ್ದರ್ಜಂಗ್, ಜಾಫರ್ಪುರದಲ್ಲಿ ಕನಿಷ್ಠ 4.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಇಲಾಖೆಯ ಪ್ರಾದೇಶಿಕ ಮುನ್ಸೂಚನೆ ಕೇಂದ್ರದ ಅಧಿಕಾರಿ ಹೇಳಿದ್ದಾರೆ.

ಕೇವಲ ಎರಡು ದಿನಗಳಲ್ಲಿ ಕನಿಷ್ಠ ತಾಪಮಾನವು ಸುಮಾರು ಒಂಬತ್ತು ಡಿಗ್ರಿಗಳಷ್ಟು ಕಡಿಮೆಯಾಗಿದ್ದು, ನಿನ್ನೆ 4.7 ಡಿಗ್ರಿ ಸೆಲ್ಸಿಯಸ್ ಮತ್ತು ಭಾನುವಾರ 10.2 ಡಿಗ್ರಿ ಸೆಲ್ಸಿಯಸ್ ಇತ್ತು. ಜನವರಿ 8 ರಂದು, ನಗರದಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು, ಇಂದು ಮುಂಜಾನೆ ತಾಪಮಾನವು 1.4ಡಿಗ್ರಿಗೆ ಕುಸಿತ ಕಾಣುವ ಮೂಲಕ ಋತುವಿನ ಅತ್ಯಂತ ಕಡಿಮೆ ತಾಪಮಾನವಾಗಿ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!