ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತುಮಟಿ ತಾಂಡ ಬಳಿ ನಿಂತಿದ್ದ ಲಾರಿಗೆ ಮತ್ತೊಂದು ಮೈನಿಂಗ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ.
ಲಾರಿಯಲ್ಲಿ ಸಿಲುಕಿದ್ದ ಚಾಲಕ ಅದೃಷ್ಟವಶಾತ್ ಬದುಕುಳಿದಿದ್ದಾನೆ. ಟ್ರ್ಯಾಕ್ಟರ್ ನಜ್ಜುಗುಜ್ಜಾದ ಲಾರಿಯಲ್ಲಿ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ.
ಗಾಲಿ ಜನಾರ್ದನರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರು ಮಾನವೀಯತೆ ಮೆರದಿದ್ದಾರೆ. ಅಪಘಾತದಿಂದ ಗಾಯಗೊಂಡವರನ್ನು ಸುರಕ್ಷಿತವಾಗಿ ರಕ್ಷಿಸಲು ಸಹಾಯ ಮಾಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.