ಹೊಸದಿಗಂತ ಡಿಜಿಟಲ್ ಡೆಸ್ಕ್
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಕಂದಾಯ ಸಚಿವ ಆರ್ ಅಶೋಕ್ ಅವರು ಇಂದು ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಮಧ್ಯಾಹ್ನ ಭೇಟಿ ನೀಡಿದ ಅಶೋಕ್ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ದೇವೇಗೌಡರು ಬರಮಾಡಿಕೊಂಡರು.
ನಂತರ ದೇವೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಅಶೋಕ್, ಕೆಲ ಕಾಲ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು ಎನ್ನಲಾಗಿದೆ.
ಗೌಡರ ನಿವಾಸಕ್ಕೆ ಸಚಿವ ಅಶೋಕ್ ದಿಢೀರ್ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳು ಭಾರಿ ಮಹತ್ವ ಪಡೆದುಕೊಂಡಿದ್ದು, ದೇವೇಗೌಡರ ಭೇಟಿಗೆ ಈ ಕಾರಣವೂ ಇರಬಹುದೆಂದು ಹೇಳಲಾಗುತ್ತಿದೆ.