ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟಿಸಿದ ಸಚಿವ ಅಶ್ವಿನಿ ವೈಷ್ಣವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಿದ್ದಾರೆ. ತದನಂತರ ವಿಶೇಷ ಅಂಚೆ ಲಕೋಟೆ ಹಾಗೂ ಅಂಚೆ ಕಚೇರಿಯ ಮಾದರಿಯನ್ನು ಬಿಡುಗಡೆ ಮಾಡಿದ್ದಾರೆ.

ಕೇಂಬ್ರಿಡ್ಜ್ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ರಿಮೋಟ್ ಮೂಲಕ
ಉದ್ಘಾಟಿಸಿದ್ದಾರೆ.

Watch | Now, a 3D printed post office building coming up in Bengaluru - The Hinduಅಂಚೆ ಇಲಾಖೆಯಿಂದ ಈ ಕಟ್ಟಡ ನಿರ್ಮಾಣವಾಗಿದ್ದು, ಕೇಂಬ್ರಿಡ್ಜ್ ಲೇಔಟ್ ಪಿಒ ಎಂದು ಹೆಸರಿಡಲಾಗಿದೆ. ಮಾರ್ಚ್ 21ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು, 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ.

L&T is building India's first 3D-printed post office in Bengaluru | See Picsಒಳಚರಂಡಿ ಹಾಗೂ ನೀರಿನ ಸಂಪರ್ಕ ಸಂಬಂಧಿತ ವಿವಿಧ ಕೆಲಸಗಳಿಂದ ಉದ್ಘಾಟನೆ ತುಸು ತಡವಾಗಿದ್ದು, ಇಂದು ಸಚಿವ ಅಶ್ವಿನಿ ವೈಷ್ಣವ್ ಕಚೇರಿಯನ್ನು ಲೋಕಾರ್ಪಣೆ ಮಾಡಿದ್ದಾರೆ.

Bengaluru to get first-of-its-kind 3D printed post office building - The Hinduಹಲಸೂರು ಬಜಾರ್‌ನಲ್ಲಿರುವ ಪ್ರಸ್ತುತ ಅಂಚೆ ಕಚೇರಿಯನ್ನು ಮುಚ್ಚಿ ಅಲ್ಲಿನ ಸಿಬ್ಬಂದಿ ಮತ್ತು ಸಾಮಾಗ್ರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಈ ಕಟ್ಟಡ ನಿರ್ಮಾಣಕ್ಕೆ ಒಟ್ಟಾರೆ 26 ಲಕ್ಷ ರೂಪಾಯಿ ವೆಚ್ಚವಾಗಿದೆ. ಆದರೆ ಇತರೆ ಎಲ್ಲಾ ವೆಚ್ಚಗಳನ್ನೂ ಸೇರಿಸಿದರೆ ಒಟ್ಟಾರೆ 40ಲಕ್ಷ ರೂಪಾಯಿ ಖರ್ಚಾಗಿದೆ. ಸಾಂಪ್ರದಾಯಿಕ ಕಟ್ಟಡಗಳಿಗೆ ಹೋಲಿಸಿದರೆ ಶೇ.30-40ರಷ್ಟು ಹಣ ಕಡಿಮೆ ವೆಚ್ಚವಾಗಿದೆ.

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!