May 20, 2026
Wednesday, May 20, 2026
spot_img

ಸಚಿವ ಡಿ. ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಕೆಲ ದಿನಗಳ ಹಿಂದೆಯೇ ಸುಧಾಕರ್‌ ಅವರನ್ನು ಅಡ್ಮಿಟ್‌ ಮಾಡಲಾಗಿತ್ತು. ಇದೀಗ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲ ದಿನಗಳ ಹಿಂದಷ್ಟೇ ಸುಧಾಕರ್‌ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್‌ ಸಕ್ಸಸ್‌ ಆಗಿತ್ತು.

ಇದಾಗಿ ಮೂರ್ನಾಲ್ಕು ದಿನದ ನಂತರ ಸುಧಾಕರ್‌ ಅವರಿಗೆ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿದೆ. ಇದಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗುತ್ತಿಲ್ಲ.

ಶ್ವಾಸಕೋಶದ ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿದ್ದು, ಇದೀಗ ಮಣಿಪಾಲ್‌ ಆಸ್ಪತ್ರೆಯಿಂದ ಕಿಮ್ಸ್‌ಗೆ ಸ್ಥಳಾಂತರಿಸಲಾಗಿದೆ. ಇಲ್ಲಿಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಆರೋಗ್ಯ ಸ್ಥಿತಿ ಬಗ್ಗೆ ಆಸ್ಪತ್ರೆ ಈವರೆಗೂ ಯಾವುದೇ ಅಪ್ಡೇಟ್‌ ನೀಡಿಲ್ಲ. ಸದ್ಯ ಅವರ ಲಂಗ್ಸ್‌ ಟ್ರಾನ್ಸ್‌ಪ್ಲಾಂಟ್‌ ಬಗ್ಗೆಯೂ ವೈದ್ಯರು ಆಲೋಚನೆ ಮಾಡುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !