July 23, 2026
Thursday, July 23, 2026
spot_img

ಸಚಿವ ಡಿ. ಸುಧಾಕರ್ ನಿಧನ: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಸಚಿವ ಡಿ. ಸುಧಾಕರ್ (63) ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಈ ಸಂಬಂಧ ಗೌರವಾರ್ಥವಾಗಿ ಮೇ 10 ರಿಂದ ಮೇ 12 ರವರೆಗೆ ಒಟ್ಟು ಮೂರು ದಿನಗಳ ಕಾಲ ರಾಜ್ಯಾದ್ಯಂತ ಅಧಿಕೃತ ಶೋಕಾಚರಣೆಯನ್ನು ಘೋಷಿಸಿದೆ.

ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಮತ್ತು ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲು ಸೂಚಿಸಲಾಗಿದೆ.

ಸುಧಾಕರ್ ಅವರ ಕಾರ್ಯಕ್ಷೇತ್ರವಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರಕಾರ ನಿರ್ಧರಿಸಿದೆ. ಪೊಲೀಸ್ ಗೌರವ ವಂದನೆಯೊಂದಿಗೆ ಮೃತರ ಪಾರ್ಥಿವ ಶರೀರದ ಅಂತಿಮ ವಿಧಿವಿಧಾನಗಳು ನಡೆಯಲಿವೆ.

ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಿ. ಸುಧಾಕರ್ ಅವರು ಸೌಮ್ಯ ಸ್ವಭಾವದ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು.ಸಿದ್ದರಾಮಯ್ಯ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !