ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಖ್ಯಿಕ ಹಾಗೂ ಅಂಕಿ ಖಾತೆಯ ಸಚಿವ ಡಿ. ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿದ್ದ ಸುಧಾಕರ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆಯೇ ಸಮಸ್ಯೆ ಕಂಡುಬಂದಿದ್ದು, ತಕ್ಷಣವೇ ಯಶವಂತಪುರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ್ದು, ಆರೋಗ್ಯದ ಸ್ಥಿತಿ ಬಗ್ಗೆ ಯಾವುದೇ ಅಪ್ಡೇಟ್ ಸಿಕ್ಕಿಲ್ಲ.



