Tuesday, March 21, 2023

Latest Posts

ಆರ್.ಆರ್.ನಗರ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಕಡಿಮೆ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ: ಸಚಿವ ಧರ್ಮೇಂದ್ರ ಪ್ರಧಾನ್ ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಡಯಾಲಿಸಿಸ್ ಘಟಕವನ್ನು ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ದಿ ಇಲಾಖೆ ಸಚಿವರಾದ ಧರ್ಮೇಂದ್ರ ಪ್ರಧಾನ್ ಉದ್ಘಾಟಿಸಿದರು.

ಬಡವರಿಗೆ, ಅಗತ್ಯವುಳ್ಳವರಿಗೆ ಅನುಕೂಲವಾಗಲೆಂದು ರಿಯಾಯಿಯಿತಿ ದರದಲ್ಲಿ ಡಯಾಲಿಸಿಸ್‌ ಚಿಕಿತ್ಸೆಯನ್ನು ರಾಷ್ಟ್ರೋತ್ಥಾನ ಆಸ್ಪತ್ರೆ ವತಿಯಿಂದ ಕಲ್ಪಿಸಲಾಗುತ್ತಿದ್ದು ಆಸ್ಪತ್ರೆಯಲ್ಲಿರುವ ಡಯಾಲಿಸಿಸ್ ಘಟಕವು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಪರಿಣತ ಸಿಬ್ಬಂದಿಗಳು ಕಾಳಜಿಯಿಂದ ರೋಗಿಗಳಿಗೆ ಉತ್ತಮ ಸೇವೆ ಒದಗಿಸಲಿದ್ದಾರೆ. ಆಸ್ಪತ್ರೆಯಲ್ಲಿ 24/7 ಐಸಿಯು ಆರೋಗ್ಯ ಸೇವೆ ಲಭ್ಯವಿದ್ದು ಯಾವುದೇ ಸ್ವರೂಪದ ತುರ್ತು ಆರೋಗ್ಯ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!