ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ನಿಫಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ರಾಜ್ಯದ ಎಲ್ಲಾ ಗಡಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ, ಚಾಮರಾಜನಗರ, ಕೊಡು ಹಾಗೂ ಮೈಸೂರು ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳ ಜತೆ ಸಚಿವರು ಸಭೆ ನಡೆಸಿದ್ದು, ರಾಜ್ಯದಲ್ಲಿ ಯಾವುದೇ ನಿಫಾ ಪ್ರಕರಣ ದಾಖಲಾಗಿಲ್ಲ. ರಾಜ್ಯಕ್ಕೆ ಸೋಂಕು ಕಾಲಿಡದಂತೆ ಎಚ್ಚರಿಕೆ ವಹಿಸಬೇಕಿದೆ ಎಂದಿದ್ದಾರೆ.
ಈವರೆಗೂ ರಾಜ್ಯದಲ್ಲಿ ಯಾರಿಗೂ ನಿಫಾ ಲಕ್ಷಣಗಳು ಕಂಡುಬಂದಿಲ್ಲ. ಚೆಕ್‌ಪೋಸ್ಟ್‌ಗಳಲ್ಲಿ ಸ್ಕ್ರೀನಿಂಗ್ ಪ್ರಕ್ರಿಯೆ ಮುಂದುವರಿದಿದ್ದು, ಸಾಕಷ್ಟು ಮಂದಿ ತಪಾಸಣೆ ನಡೆಸಲಾಗಿದೆ. ಆದರೆ ಯಾರಿಗೂ ನಿಫಾ ಲಕ್ಷಣಗಳು ಕಾಣಿಸಿಲ್ಲ. ನಿಫಾ ಲಕ್ಷಣಗಳು ಕಾಣಿಸಿದರೂ ಅಂತವರನ್ನು ಪ್ರತ್ಯೇಕ ಐಸೋಲೇಷನ್ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತದೆ ಎಂದಿದ್ದಾರೆ.