Wednesday, October 5, 2022

Latest Posts

ಘಟಪ್ರಭಾ ನದಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಸಚಿವ ಗೋವಿಂದ ಕಾರಜೋಳ

ಹೊಸದಿಗಂತ ವರದಿ, ಬಾಗಲಕೋಟೆ:
ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ಮುಧೋಳ ಕ್ಷೇತ್ರದ ಸೊರಗಾಂವ ಗ್ರಾಮದ ಬಳಿ ಘಟಪ್ರಭಾ ನದಿಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಘಟಪ್ರಭಾ ನದಿಯಲ್ಲಿ ಅಪಾರ ಪ್ರಮಾಣದ ನೀರಿನ ಹರಿವು ಇರುವುದರ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಕೆಲ ತೋಟದ ಮನೆಗಳು ಜಲಾವೃತವಾಗಿದ್ದು ಅಲ್ಲಿಯ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ನದಿ ತೀರಕ್ಕೆ ಹೋಗದೆ ಜಾಗರೂಕರಾಗಿ ಇರಬೇಕು. ಯಾವುದೇ ಪರಿಸ್ಥಿತಿ ಎದುರಿಸಲು ಮುಧೋಳ ತಾಲೂಕು ಆಡಳಿತ ಸರ್ವ ಸನ್ನದ್ಧವಾಗಿದೆ ಎಂದು ಸಚಿವರು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!