ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಗಾವಣೆ ದಂಧೆ ವಿಚಾರವಾಗಿ ಪೆನ್ ಡ್ರೈವ್ ನಲ್ಲಿರುವ ರಹಸ್ಯ ಹೊರಗಡೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ಪೆನ್ ಡ್ರೈವ್ ನಲ್ಲಿರುವ ಮಾಹಿತಿಯನ್ನು ಬಿಡುಗಡೆ ಮಾಡುತ್ತೇನೆ. ಇದರ ಬಗ್ಗೆ ಯಾರು ಬೇಕಾದರೂ ಏನಾದರು ಮಾತನಾಡಲಿ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಸಮಯ ಬಂದಾಗ ಪೆನ್ ಡ್ರೈವ್ನಲ್ಲಿರುವ ಮಾಹಿತಿ ಬಿಡುಗಡೆ ಮಾಡುತ್ತೇನೆ, ಆಗ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಗುಡುಗಿದ್ದಾರೆ.