ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಕೈಗಾಗಿಕಾ ಸಚಿವ ಎಂ.ಬಿ ಪಾಟೀಲ್ ಆಹ್ವಾನಿಸಿದ್ದಾರೆ.
ವಿಪಕ್ಷ ನಾಯಕ ಆಯ್ಕೆ ವಿಚಾರವಾಗಿ ಟ್ವೀಟ್ ಮಾಡಿರುವ ಸಚಿವರು,”ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು. ಅಂತಿಮವಾಗಿ ಬಸವರಾಜ ಬೊಮ್ಮಾಯಿ ಅವರನ್ನು ಮೂಲೆಗುಂಪು ಮಾಡಲು ನಿರ್ಧರಿಸಿದಂತಿದೆ. ಬೊಮ್ಮಾಯಿಯವರಿಗೂ ಸಹ ಶ್ರೀ ಯಡಿಯೂರಪ್ಪ, ಶ್ರೀ ಜಗದೀಶ್ ಶೆಟ್ಟರ್ ಅವರಿಗೆ ಬಂದಂತಹ ಪರಿಸ್ಥಿತಿಯೇ ಬರಲಿದೆ” ಎಂದು ಹೇಳಿದ್ದಾರೆ.
“ಬಿಜೆಪಿ ಎಂಬುದು ಕುಸಿಯುತ್ತಿರುವ ಕಾರ್ಡ್ ಗಳ ಮನೆಯಾಗಿದೆ. ಬೊಮ್ಮಾಯಿಯವರು ಕಾಂಗ್ರೆಸ್ ಸೇರುವ ಬಗ್ಗೆ ಯೋಚಿಸಬೇಕು. ಅವರು ಈ ಹಿಂದಿನಂತೆ ಹಾಗೂ ಹಿರಿಯ ಬೊಮ್ಮಾಯಿಯವರಂತೆ ಜಾತ್ಯಾತೀತ ಸಿದ್ಧಾಂತಕ್ಕೆ ಮರಳಿದರೆ ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಬಹುದು’ ಎಂದು ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದ್ದಾರೆ.
ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಶ್ರೀ @hd_kumaraswamy ಅವರಿಗೆ ಅಭಿನಂದನೆಗಳು.
ಅಂತಿಮವಾಗಿ @BJP4Karnatakaವು ಶ್ರೀ @BSBommai ಅವರನ್ನು ಮೂಲೆಗುಂಪು ಮಾಡಲು ನಿರ್ಧರಿಸಿದಂತಿದೆ.
ಬೊಮ್ಮಾಯಿಯವರಿಗೂ ಸಹ ಶ್ರೀ @BSYBJP, ಶ್ರೀ @JagadishShettar ಅವರಿಗೆ ಬಂದಂತಹ ಪರಿಸ್ಥಿತಿಯೇ ಬರಲಿದೆ.
ಬಿಜೆಪಿ ಎಂಬುದು ಕುಸಿಯುತ್ತಿರುವ… pic.twitter.com/ZlchqdhNX1
— M B Patil (@MBPatil) July 17, 2023