ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿಗಳನ್ನು ಬಳಸುವುದಿಲ್ಲ ಎಂದು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಂಡು ಪೆಂಡಾಲ್ಗೆ ಅನುಮತಿ ನೀಡುವಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
“ಪಿಒಪಿ ಗಣೇಶ ಮೂರ್ತಿಗಳಲ್ಲಿರುವ ವಿಷಕಾರಿ ಅಂಶಗಳು ನೀರಿನಲ್ಲಿ ಸೇರಿ ಜಲಚರಗಳ ಸಾವಿಗೆ ಕಾರಣವಾಗುತ್ತವೆ. ಹೀಗಾಗಿ, ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಒಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ ಮೂರ್ತಿಗಳನ್ನು ಪೂಜಿಸಬೇಕು” ಎಂದು ಮನವಿ ಮಾಡಿದ್ದಾರೆ.