ಹೊಸದಿಗಂತ ಡಿಜಿಟಲ್ ಡೆಸ್ಕ್:
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚಿತಾ, ಜಾಗ್ವರ್ ಸೇರಿದಂತೆ ಹತ್ತು ವಿದೇಶಿ ವನ್ಯಜೀವಿಗಳು ಸೇರ್ಪಡೆಯಾಗಲಿವೆ ಎಂದು ತಿಳಿಸಿದರು. ಉದ್ಯಾನವನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ ಪ್ರಾಯೋಗಿಕವಾಗಿ ಸಂಚರಿಸಲಿದೆ. ಡೀಸೆಲ್ ವಾಹನಗಳಿಂದ ಹೊರಹೊಮ್ಮುವ ಇಂಗಾಲದ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗಿದೆ ಎಂದು ತಿಳಿಸಿದರು.