ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿದ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಂದು ಅಹಮದಾಬಾದ್ ಏರ್‌ಪೋರ್ಟ್‌ನಲ್ಲಿ ಮುಖಾಮುಖಿಯಾಗಿದ್ದಾರೆ.
ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕ ಭೇಟಿಯಾದ ಇಬ್ಬರೂ ಕೆಲ ಕಾಲ ಪರಸ್ಪದ ಚರ್ಚೆ ನಡೆಸಿದರು. ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನದ ಅನುಭವಗಳನ್ನ ಆಲಿಸಿದ ಸಚಿವ ಜೋಶಿ ಹರ್ಷ ವ್ಯಕ್ತಪಡಿಸಿದ್ದಾರೆ.