ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರುಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆಯನ್ನು ನೀಡಿದ್ದಾರೆ.
ಹೈಕಮಾಂಡ್ ನೀಡುವ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ. ಇದೀಗ ಈ ವಿಚಾರವಾಗಿ ಸಿದ್ದರಾಮಯ್ಯ ಅವರಿಗೆ ಸಚಿವ ಸಚಿವ ಕೆ.ಎನ್ ರಾಜಣ್ಣ ಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಕಚೇರಿಯಲ್ಲಿ ಕೆ.ಎನ್ ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.