ಹೊಸದಿಗಂತ ವರದಿ, ಅಂಕೋಲಾ
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೋಕರ್ಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಡಾ.ಎಸ್. ವಿ.ಜಠಾರ ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಿಸಿ, ಅವರಿಂದ ಆಶೀರ್ವಾದ ಪಡೆದರು.
ಗೋಕರ್ಣದಲ್ಲಿ ಡಾ.ಎಸ್. ವಿ.ಜಠಾರ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಮುಖರೊಂದಿಗೆ ಸಚಿವ ಪೂಜಾರಿ ಶನಿವಾರ ರಾತ್ರಿ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ಗೋಕರ್ಣ ಭಾಗದಲ್ಲಿ ಸಂಘ ಪರಿವಾರವನ್ನು ಕಟ್ಟಿ ಬೆಳೆಸಿದ ಡಾ.ಜಠಾರ ಅವರು ನಮ್ಮ ಧರ್ಮ, ಸಂಸ್ಕೃತಿಯ ಉಳಿವಿಗಾಗಿ ಮಾರ್ಗದರ್ಶನ ಮಾಡುತ್ತಾ ಬಂದಿದ್ದಾರೆ. ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದಿರುವುದು ಸಂತೋಷ ತಂದಿದೆ ಎಂದರು.
ಈ ಸಂದರ್ಭದಲ್ಲಿ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾಪಕ ಮಂಗೇಶ ಬೇಂಡೆ, ಜಿಲ್ಲಾ ಸಂಚಾಲಕ ಹನುಮಂತ ಶಾನಭಾಗ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ ಪ್ರಮುಖರುಗಳಾದ ಗೋಪಾಲಕೃಷ್ಣ ಭಟ್, ರವಿ ಗುನಗಾ ಮೊದಲಾದವರು ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ