ಹೊಸ ದಿಗಂತ ಡಿಜಿಟಲ್ ಡೆಸ್ಕ್
ಸರ್ಕಾರ ಹಿಂದುಳಿದ ವರ್ಗಗಳಿಗೆ ಸಾಕಷ್ಟು ಅನುದಾನಗಳನ್ನು ಬಿಡುಗಡೆ ಮಾಡಿದ್ದು, ಶ್ರದ್ಧೆ ಮತ್ತು ಅನುಭವದಿಂದ ಉದ್ಯಮದಲ್ಲಿ ಯಶಸ್ಸು ಕಾಣುವುದಕ್ಕೆ ಸಾಧ್ಯ. ಸ್ವ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ಇತ್ಯಾದಿ ಪರಿಕರಗಳನ್ನು ನೀಡಲಾಗುತ್ತಿದ್ದು , ಅಂಬೇಡ್ಕರ್ ಪರಿಕಲ್ಪನೆಯಂತೆ ಎಲ್ಲರಿಗೂ ಕೆಲಸ ಮಾಡುವ ಅವಕಾಶ ಸಿಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಹೊಂಬಾಡಿ ಮಂಡಾಡಿಯಲ್ಲಿ ಕುಸುಮ ಅವರ ಮನೆಯಲ್ಲಿ ರಾಜ್ಯದಲ್ಲಿಯೇ ಮೊದಲ ಗಂಗಾಕಲ್ಯಾಣ ಯೋಜನೆ ಮತ್ತು ಸೌಲಭ್ಯ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೌರವಿಸಲಾಯಿತು.
ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಮಡಿವಾಳ, ಉಪಾಧ್ಯಕ್ಷೆ ಸವಿತಾ ನಾಯಕ್, ಸ್ಥಳೀಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ರಾಧಾ, ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶಂಕರ್, ವೆಂಕಟೇಶ್, ಮೆಸ್ಕಾಂ ಸಹಾಯಕ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ವಿಜಯಕುಮಾರ್ ಮತ್ತಿತರರಿದ್ದರು.