Thursday, December 8, 2022

Latest Posts

ನಾಳೆ ದೈವ ನರ್ತಕರೊಂದಿಗೆ ‘ಕಾಂತಾರ’ ವೀಕ್ಷಿಸಲಿರುವ ಸಚಿವ ಕೋಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾದ ಕನ್ನಡದ ‘ಕಾಂತಾರ’ ಸಿನೇಮಾವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಳೆ (ಬುಧವಾರ) ವಿಭಿನ್ನವಾಗಿ ವೀಕ್ಷಿಸಲಿದ್ದಾರೆ.

ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮೂಡಿ ಬಂದ ತುಳುನಾಡಿನ ದೈವಾರಾಧನೆ, ಕಂಬಳ ಸಹಿತ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಕಾಂತಾರ ಸಿನಿಮಾವನ್ನು ಕುಂದಾಪುರ ಭಾಗದ ದೈವ ನರ್ತಕರು, ದರ್ಶನ ಪಾತ್ರಿಗಳ ಸಹಿತ, ದೈವದ ಸೇವೆ ಮಾಡುವ ಸಮಾಜ ಮತ್ತು ವ್ಯಕ್ತಿಗಳೊಂದಿಗೆ ಸಿನಿಮಾ ವೀಕ್ಷಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಾನು ಕುಂದಾಪುರ ಕೋಟೇಶ್ವರದ ಭಾರತ್ ಸಿನಿಮಾ ಮಂದಿರದಲ್ಲಿ ಚಿತ್ರವನ್ನು ವೀಕ್ಷಿಸುವುದಾಗಿ ಹೇಳಿದ್ದಾರೆ.

ಮೂಲಗಳ ಪ್ರಕಾರ ಈಗಾಗಲೇ ಸಿನಿಮಾ ಮಂದಿರದಲ್ಲಿ ನೂರಕ್ಕೂ ಅಧಿಕ ಟಿಕೆಟಗಳನ್ನು ಸಚಿವರ ಹೆಸರಿನಲ್ಲಿ ಕಾಯ್ದಿರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!