ಹೊಸದಿಗಂತ ವರದಿ, ಅಂಕೋಲಾ:
ಮಳೆಯಿಂದಾಗಿ ಸಂಭವಿಸಿದ ಹಾನಿ ಕುರಿತು ಪರಿಶೀಲನೆಗೆ ಆಗಮಿಸಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಕುಮಟಾ ತಾಲೂಕಿನ ಬೆಟ್ಕುಳಿಯಲ್ಲಿ ಅಘನಾಶಿನಿ ನದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತ ಪಟ್ಟ ಇಬ್ಬರು ಕೃಷಿಕರ ಮನೆಗಳಿಗೆ ಭೇಟಿ ನೀಡಿ ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ಗಳನ್ನು ನೀಡಿದರು.
ಬೆಟ್ಕುಳಿಯ ಅಘನಾಶಿನಿ ನದಿ ತೀರದಲ್ಲಿ ಇರುವ ಕೃಷಿ ಭೂಮಿಗೆ ಬೇಲಿ ನಿರ್ಮಾಣ ಮಾಡಲು ತೆರಳಿದ ಸಂದರ್ಭದಲ್ಲಿ ಮಳೆಯ ಕಾರಣ ಜಮೀನಲ್ಲಿ ತುಂಬಿದ ನದಿ ನೀರಿನ ಸೆಳೆತಕ್ಕೆ ಸಿಲುಕಿ ಸತೀಶ ಪಾಂಡುರಂಗ ನಾಯ್ಕ ಮತ್ತು ಉಲ್ಲಾಸ ಗಾವಡಿ ಎನ್ನುವವರು ಮೃತ ಪಟ್ಟಿದ್ದರು.
ಮೃತರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರೊಂದಿಗೆ ಭೇಟಿ ನೀಡಿದ ಕಂದಾಯ ಸಚಿವರು ಪ್ರಾಕೃತಿಕ ವಿಕೋಪದಿಂದ ನಡೆದ ದುರ್ಘಟನೆ ಕುರಿತು ಮಾಹಿತಿಯನ್ನು ಪಡೆದುಕೊಂಡು ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಿಸಿದರು.
ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಾಳಿಕಟ್ಟಿ, ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ, ಕಂದಾಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.