ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವಿರುದ್ಧ ಅವಹೇಳನಕಾರಿ ಪದ ಬಳಕೆ ಪ್ರಕರಣ ಸಂಬಂಧ ಬಿಜೆಪಿ ಎಂಎಲ್ಸಿ ಸಿಟಿ ರವಿ ದೂರು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು (ಮೇ 02) ವಜಾ ಮಾಡಿದೆ.
ಇದು ಶಾಸನ ಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.
ಸಿಟಿ ರವಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ವಿಧಾನ ಪರಿಷತ್ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ದೂರುದಾರರೇ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಪ್ರಶ್ನಿಸಿದ್ದರು. ಇದೇ ವೇಳೆ ಹೆಬ್ಬಾಳ್ಕರ್ ಪ್ರಕರಣದಲ್ಲಿ ಕಕ್ಷಿದಾರರಾಗಿ ಇರುವುದಾಗಿ ವಕೀಲರು ದೃಢಪಡಿಸಿದ್ದರು. ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ, ಸಿಟಿ ರವಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.