ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರೊಬ್ಬರು ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆಗಳು ಮುರಿತವಾಗಿದೆ, ಕುತ್ತಿಗೆಗೆ ಪೆಟ್ಟು ಬಿದ್ದಿದೆ, ಅವರಿಗೆ ಮೆದುಳು ಬಾವು ಬಂದಿದೆ ಆದ್ದರಿಂದ ನಾವು ಅವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಮತ್ತು ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.