ಹೊಸದಿಗಂತ ವರದಿ,ಬೆಳಗಾವಿ:
ಬೆಳಗಾವಿ ಜಿಲ್ಲೆಯಲ್ಲಿಯೂ ಹುಲಿ ಉಗುರು ಲಾಕೇಟ್ ಸದ್ದು ಕೇಳಿ ಬರುತ್ತಿದೆ.
ಜಿಲ್ಲೆಯ ಪ್ರಭಾವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಹೆಸರು ಮುನ್ನೆಲೆಗೆ ಬಂದಿದೆ. ಅವರ ಪುತ್ರನ ಭಾವಚಿತ್ರ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ ಕೊರಳಲ್ಲಿ ಹುಲಿ ಉಗುರು ಮಾದರಿ ಲಾಕೇಟ್ ಕಾಣುತ್ತಿದೆ. ಲಕ್ಷ್ಮೀ ಹೆಬ್ಬಾಳಕರ ಅವರು ಈ ಹಿಂದೆ ತಮ್ಮ ಫೇಸ್ ಬುಕ್ ನಲ್ಲಿ ಹಂಚಿಕೊಂಡಿರುವ ಭಾವಚಿತ್ರ ಎನ್ನಲಾಗುತ್ತಿದ್ದು, ಈ ಕುರಿತು ಅರಣ್ಯಾಧಿಕಾರಿಗಳತ್ತ ಎಲ್ಲರ ಚಿತ್ತ ನೆಟ್ಟಿದೆ.