ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಳ್ಕರ್‌

ದಿಗಂತ ವರದಿ ಹುಬ್ಬಳ್ಳಿ:

ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬಾಳ್ಕರ ಶನಿವಾರ ಭೇಟಿ‌ ನೀಡಿ ಸಾಂತ್ವಾನ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನೇಹಾ ಪಾಲಕರು ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ‌. ದೊಡ್ಡ ಸಮಾಜ ನಾವೆಲ್ಲಾ ಜೊತೆಯಲ್ಲಿ ಇರ್ತೀವಿ ಅಂತ ಹೇಳಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದರು.

ನಿಜವಾಗಿಯೂ ಇಂತಹ ಘಟನೆ ನಡೆಯಬಾರದಿತ್ತು. ಇದನ್ನು ನಾನು‌ ಖಂಡಿಸುತ್ತೇವೆ. ಪ್ರಕರಣದ ತನಿಖೆ ಬಗ್ಗೆ ಯಾರಿಗೂ, ಯಾವುದೇ ಸಂಶಯ ಬೇಡ. ತನಿಖೆ ನಡೆಯಲಿದೆ ಎಂದು ಹೇಳಿದರು.
ಇಂತಹ ಸಂದರ್ಭದಲ್ಲಿ‌ ಸಾಂತ್ವನ, ಸಮಾಧಾನ ಹೇಳಿದರೆ ಸಾಲದು. ಈ ವೇಳೆ ಯಾವುದೇ ರಾಜಕೀಯ ಮಾತುಗಳ ಬೇಡ ಎಂದು ಪತ್ರಕರ್ತರಲ್ಲಿ ಮನವಿ ಮಾಡಿದರು.

ಈ ವೇಳೆ ಹುಬ್ಬಳ್ಳಿ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಯುವ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ, ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಸುವರ್ಣ ಕಲ್ಲಕುಂಟ್ಲ, ಮೋಹನ್ ಲಿಂಬಿಕಾಯಿ, ಬಂಗಾರೇಶ ಹಿರೇಮಠ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!