Sunday, October 1, 2023

Latest Posts

ಗಾಯಾಳು ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ಸ್ಥಳೀಯರ ಮೆಚ್ಚುಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಸೋಮವಾರವಷ್ಟೇ ಚಾಮರಾಜನಗರದ ಹೊರವಲಯದಲ್ಲಿ ರಸ್ತೆ ಅಪಘಾತದಿಂದ ರಕ್ತದ ಮಡುವಿನಲ್ಲಿ ನರಳುತ್ತಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಂದು ಓರ್ವ ವಿದ್ಯಾರ್ಥಿಗೆ ಆಟೋ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು‌.

ಉಡುಪಿಯ ಕಾಪು ತಾಲೂಕಿನ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ‘ಸಹಕಾರಿ ಮಹಲ್’ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸಚಿವರು ಉಡುಪಿಯತ್ತ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬನಿಗೆ ಅಪರಿಚಿತ ವಾಹನಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲೆ ನರಳುತ್ತಿದ್ದ‌.

ಇದನ್ನು ಕಂಡ ಸಚಿವರು, ವಿದ್ಯಾರ್ಥಿಯ ನರಳಾಟವನ್ನು ಕಂಡು ತಕ್ಷಣವೇ ಕಾರನ್ನು ನಿಲ್ಲಿಸಿ, ಆತನಿಗೆ ಉಪಚರಿಸಿ, ಬಳಿಕ ಅಲ್ಲಿಯೇ ನಿಂತಿದ್ದ ಆಟೋವೊಂದರಲ್ಲಿ ವಿದ್ಯಾರ್ಥಿಯನ್ನು ಕೂರಿಸಿ ಆಸ್ಪತ್ರೆಗೆ ಸಾಗಿಸಿದರು‌. ಸಚಿವರ ಈ ಕಾರ್ಯ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!