ACCIDENT | ಸಚಿವ ಮಧು ಬಂಗಾರಪ್ಪ ಕಾರು ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದಿಂದ ಬೆಂಗಳೂರಿಗೆ ಬರುವ ಮಾರ್ಗಮಧ್ಯೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕಾರ್ ಅಪಘಾತಕ್ಕೀಡಾಗಿದೆ.

ತುಮಕೂರಿನ ನಂದಿಹಳ್ಳಿ ಬಳಿ ಕಾರ್‌ಗೆ ಲಾರಿ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ.

ಅಪಘಾತದ ಬಳಿಕ ಸಚಿವರು ಬೇರೆ ಕಾರ್‌ನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!