57ನೇ ವಸಂತಕ್ಕೆ ಕಾಲಿಟ್ಟ ಸಚಿವ ಮುರುಗೇಶ್‌ ನಿರಾಣಿ: ಗೋಪೂಜೆ ಸಲ್ಲಿಸಿ ಹುಟ್ಟುಹಬ್ಬ ಆಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿಯವರಿಗೆ ಹುಟ್ಟುಹಬ್ಬದ ಸಂಭ್ರಮ. 57ನೇ ವಸಂತಕ್ಕೆ ಕಾಲಿಟ್ಟ ಅವರಿಗೆ ಭರಪೂರ ಶುಭಾಶಯಗಳ ಸುರಿಮಳೆ ಹರಿಯುತ್ತಿದೆ.

ಅವರ ಜನ್ಮದಿನದ ಹಿನ್ನೆಲೆಯಲ್ಲಿ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುಧೋಳದಲ್ಲಿ ನಿರಾಣಿ ದಂಪತಿ ಗೋವುಗಳಿಗೆ ಪೂಜೆ ಸಲ್ಲಿಸಿದರು. ಈ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಊರಿನ ಮುಖಂಡರು,ಗ್ರಾಮಸ್ಥರು ಹಾಗೂ ರೈತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!