ಉಮೇಶ್ ಕತ್ತಿ ನಿಧನಕ್ಕೆ ಸಚಿವ ಮುರುಗೇಶ್ ನಿರಾಣಿ ಸಂತಾಪ

ಹೊಸಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು
ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕಂಬನಿ ಮಿಡಿದಿದ್ದಾರೆ.
ನಮ್ಮ ಸಂಪುಟದ ಕ್ರಿಯಾಶೀಲ ಸಚಿವರಾಗಿದ್ದ ಅವರು ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರುವ ಮೂಲಕ ಜನಸ್ನೇಹಿಯಾಗಿದ್ದರು. ಆದರೆ, ಇಂತಹ ದುರ್ಘಟನೆ ನಡೆಯಬಾರದಿತ್ತು ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಒಟ್ಟು 8 ಬಾರಿ ಶಾಸಕರಾಗಿ ಸಚಿವರಾಗಿದ್ದುದು ಅವರ ಸಾಧನೆಯನ್ನು ತಿಳಿಸುತ್ತದೆ ಎಂದಿದ್ದಾರೆ.
8 ಬಾರಿ ಗೆದ್ದು 5 ಬಾರಿ ಮಂತ್ರಿಯಾಗಿದ್ದರು. ಸಕ್ಕರೆ, ಲೋಕೋಪಯೋಗಿ ,ಬಂಧೀಖಾನೆ, ತೋಟಗಾರಿಕೆ, ಕೃಷಿ, ಅರಣ್ಯ ಆಹಾರ ಮತ್ತು ನಾಗರಿಕ ಪೂರೈಕೆ ಹೀಗೆ ಹಲವಾರು ಇಲಾಖೆಗಳ ಸಚಿವರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿರುವ ಕತ್ತಿ ಅವರು, ಜನೋಪಯೋಗಿ ಹಾಗೂ ಜನಪರ ಕೆಲಸ ಮಾಡಿ ಸರ್ಕಾರ ಮತ್ತು ಪಕ್ಷಕ್ಕೂ ಉತ್ತಮ ಹೆಸರು ತಂದಿದ್ದರು ಎಂದು ಸ್ಮರಿಸಿದ್ದಾರೆ.
ರಾಜಕೀಯ ವಲಯಕ್ಕೆ ಸೀಮಿತವಾಗದೆ ಉದ್ಯಮಿಯಾಗಿ ಹತ್ತಾರು ಸಾವಿರ ಜನರಿಗೆ ಉದ್ಯೋಗ ನೀಡುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಿದ್ದರು ಎಂದಿದ್ದಾರೆ.
ಬೆಳಗಾವಿ ಜಿಲ್ಲೆಯ ಪ್ರಭಾವಿ ಮುಖಂಡರಾಗಿದ್ದ ಅವರು, ಬಿಜೆಪಿಗೆ ಸೇರ್ಪಡೆಯಾದ ನಂತರ ಕಿತ್ತೂರು ಕರ್ನಾಟಕದಲ್ಲಿ ಸಂಘಟನೆಗೆ ಹೆಚ್ಚು ಒತ್ತು ಕೊಟ್ಡಿದ್ದರು. ಇದರ ಪರಿಣಾಮವಾಗಿ ಈ ಭಾಗದಲ್ಲಿ ಪಕ್ಷ ಬೇರು ಮಟ್ಟದಲ್ಲಿ ‌ಪ್ರಬಲವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ರಾಜ್ಯವು ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬ ಹಾಗೂ ‌ಅಭಿಮಾನಿಗಳಿಗೆ ನೀಡಲಿ ಎಂದು ಸಚಿವ ನಿರಾಣಿ ಅವರು ಪ್ರಾರ್ಥಿಸದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!