Tuesday, September 27, 2022

Latest Posts

ಹೂಡಿಕೆದಾರರ ಸಮಾವೇಶಕ್ಕೆ ಹಿಟಾಚಿ ಕಂಪನಿ ರಾಯಭಾರಿಗಳಿಗೆ ಸಚಿವ ನಿರಾಣಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ರಾಜ್ಯ ನಿಯೋಗವು ಮೂರು ದಿನಗಳ ಜಪಾನ್‌ ಪ್ರವಾಸದಲ್ಲಿದ್ದಾರೆ. ಇಂದು ಭೇಟಿಯ ಅಂತಿಮ ದಿನವಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ಮತ್ತು ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಅವರು ಜಪಾನ್ ಮೂಲದ ಹಿಟಾಚಿ ಕಂಪನಿ ಅಧಿಕಾರಿಗಳನ್ನು ಟೋಕಿಯೋದಲ್ಲಿ ಮಂಗಳವಾರ ಭೇಟಿಯಾದರು.

ನವೆಂಬರ್‌ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಹಾಜರಾಗುವಂತೆ ಔಪಚಾರಿಕ ಆಹ್ವಾನ ನೀಡಿದರು.

ಈ ವೇಳೆ ಹಿಟಾಚಿ ಉಪಾಧ್ಯಕ್ಷ, ಪ್ರಾದೇಶಿಕ ಕಾರ್ಯತಂತ್ರಗಳ ಕಾರ್ಯನಿರ್ವಾಹಕ ಅಧಿಕಾರಿ ಕೊಜಿನ್ ನಕಾಕಿತಾ, ಉಪಾಧ್ಯಕ್ಷ, ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಪ್ರಧಾನ ವ್ಯವಸ್ಥಾಪಕ ನೊರಿಹಿರೊ ಸುಜುಕಿ ಹಾಗೂ ಕಾರ್ಪೊರೇಟ್ ಅಧಿಕಾರಿ, ಪ್ರಧಾನ ವ್ಯವಸ್ಥಾಪಕ ಅಯುಮು ಮೊರಿಟಾ ಅವರನ್ನು ರಾಜ್ಯ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!