ಕಾರ್ಮಿಕ ವಿಮೆ ಸೇರಿ ಹಲವು ಯೋಜನೆಗಳ ಸಮಸ್ಯೆ ಶೀಘ್ರ ಇತ್ಯರ್ಥ: ಸಚಿವ ನಿರಾಣಿ ಭರವಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅವರು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಮಿಕರ ರಾಜ್ಯ ವಿಮಾ ಯೋಜನೆ, ವೈದ್ಯಕೀಯ ಸೇವೆಗಳ ನಿರ್ದೇಶನಾಲಯ, ಕಾ.ರಾ.ವಿ ಚಿಕಿತ್ಸಾಲಯಗಳಿಗೆ ಜಾಗ ಹಂಚಿಕೆಯ ಪ್ರಕರಣಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ನಿರಾಣಿಯವರು, ಸಚಿವರು ಹಾಗೂ ಅಧಿಕಾರಿಗಳು ಸಮಸ್ಯೆಗಳನ್ನು ನನಗೆ ವಿವರಿಸಿದ್ದಾರೆ. ಆ ಎಲ್ಲಾ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸುವುದಾಗಿ ಅವರಿಗೆ ಭರವಸೆ ನೀಡಿದ್ದೇನೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!