September 28, 2026
Monday, September 28, 2026
spot_img

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಮನಗರಕ್ಕೆ ಬರ್ತಿದ್ದಾರೆ ಸಚಿವೆ ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ರಾಮನಗರಕ್ಕೆ ಬರುತ್ತಿದ್ದಾರೆ.

ಬೆ.11ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಕ್ಕೆ ಭೇಟಿ ನೀಡಿ, ನೂತನವಾಗಿ ನಿರ್ಮಾಣವಾಗುತ್ತಿರುವ ವೇದವಿದ್ಯಾ ವಿಹಾರ ಗುರುಕುಲದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 1ಕ್ಕೆ ಮತ್ತೆ ವಾಪಸ್ಸಾಗಲಿದ್ದಾರೆ.

ಗುರುಕುಲದ ಶಂಕುಸ್ಥಾಪನೆಗೆ ಆಹ್ವಾನಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಪೊಲೀಸ್‌ ಬಿಗಿ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ.

Must Read