ಹೊಸದಿಗಂತ ಡಿಜಿಟಲ್ ಡೆಸ್ಕ್ :
ಶುಕ್ರವಾರದಿಂದ ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಜಿ 20 ಹಣಕಾಸು ಸಚಿವರು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಯ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಯುಎಸ್ ಖಜಾನೆ ಕಾರ್ಯದರ್ಶಿ ಜಾನೆಟ್ ಯೆಲೆನ್ ಅವರನ್ನು ಭೇಟಿ ಮಾಡಿದರು.
ಭಾರತದ G20 ಅಧ್ಯಕ್ಷತೆಯಲ್ಲಿ ಫೈನಾನ್ಸ್ ಟ್ರ್ಯಾಕ್ ಆದ್ಯತೆಗಳ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಈ ವೇಳೆ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕುಗಳು (MDBs), ಜಾಗತಿಕ ಸಾಲದ ದೋಷಗಳು, ಕ್ರಿಪ್ಟೋ ಸ್ವತ್ತುಗಳು ಮತ್ತು ಆರೋಗ್ಯವನ್ನು ಬಲಪಡಿಸುವ ಬಗ್ಗೆ ತಮ್ಮ ದೃಷ್ಟಿಕೋನಗಳ ಕುರಿತು ಚರ್ಚಿಸಿದರು.
“COVID19 ಸಾಂಕ್ರಾಮಿಕದಿಂದ ಕಲಿತ ಪಾಠಗಳನ್ನು ಮರೆಯಬಾರದು ಮತ್ತು ಭವಿಷ್ಯದ ಸಾಂಕ್ರಾಮಿಕ ರೀತಿಯ ಆಘಾತಗಳಿಗೆ ಸನ್ನದ್ಧತೆಯನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ” ಎಂದು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.