ಆಗುಂಬೆ ಕೋಟೇಶ್ವರ ಮಾರ್ಗವಾಗಿ ಗುರ್ಮೆ ಗೋ ವಿಹಾರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ: ನಾಳೆ (ಫೆ. 20) ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಆಗುಂಬೆ ಮೂಲಕ ಆಗಮಿಸಿ ಮಧ್ಯಾಹ್ನ 3.45ಕ್ಕೆ ಕೋಟೇಶ್ವರ ಬೈಪಾಸ್ ಮೂಲಕ ಕಾಪು ಗುರ್ಮೆ ಫೌಂಡೇಶನ್ ಗುರ್ಮೆ ಗೋ ವಿಹಾರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯದಲ್ಲಿ ಸಾಲಿಗ್ರಾಮದ ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಭೇಟಿ ನೀಡಲಿದ್ದು, ಬ್ರಹ್ಮಾವರ ಮತ್ತು ಕಲ್ಯಾಣಪುರ ಸಂತೆಕಟ್ಟೆ ಸಹಿತ ವಿವಿಧ ಭಾಗಗಳಲ್ಲಿ ದಾರಿಯುದ್ದಕ್ಕೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಚಿವರನ್ನು ಸ್ವಾಗತಿಸಲಿದ್ದಾರೆಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!