ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಚಿವ ಡಾ. ಕೆ. ಸುಧಾಕರ್​ಗೆ ಕೃತಜ್ಞತೆ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆಸ್ಪತ್ರೆಯಲ್ಲಿ ಬೆಡ್​ ಕಾಯ್ದಿರಿಸಿದ್ದಕ್ಕಾಗಿ ಸಚಿವ ಡಾ. ಕೆ.ಸುಧಾಕರ್​ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ನನಗೆ ಇಂದು ಬೆಳಗ್ಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಂಜುನಾಥ್ ಹಾಗೂ ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ.ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸಿದ್ದರು’ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವ ಸುಧಾಕರ್ ಅವರು ತುರ್ತಾಗಿ ಸ್ಪಂದಿಸಿ ನನ್ನೊಂದಿಗೆ ಮಾತನಾಡಿದರು. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು.
ಇನ್ನು ನ್ಯಾಯಾಲಯದ ಪ್ರಕರಣವೊಂದರ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿ ಆಗಬೇಕಾಗಿದ್ದರಿಂದ ಮಧ್ಯಾಹ್ನದ ನಂತರ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದೇನೆ. ಎರಡನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲೇಕೊರೋನಾ ಚಿಕಿತ್ಸೆ ಪಡೆಯಲು ತೀರ್ಮಾನಿಸಿ, ಚೇತರಿಸಿಕೊಳ್ಳುತ್ತಿದ್ದೇನೆ. ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಎಲ್ಲರಿಗೂ ನನ್ನ ಪ್ರಣಾಮಗಳು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss