ಐವರು ಮುಸ್ಲಿಂ ಶಾಸಕರಿಗೆ ಮಂತ್ರಿ, ಒಂದು ಡಿಸಿಎಂ ಸ್ಥಾನ ಕೊಡಿ: ಕಾಂಗ್ರೆಸ್ ಮುಂದೆ ವಕ್ಫ್ ಬೋರ್ಡ್ ಅಧ್ಯಕ್ಷ ಬೇಡಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದ್ದು, ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಮುಸ್ಲಿಂ ಶಾಸಕರಿಗೆ ಮಂತ್ರಿಗಿರಿ ಹಾಗೂ ಡಿಸಿಎಂ ಸ್ಥಾನ ನೀಡಬೇಕೆಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ (Shafi Saadi) ಬೇಡಿಕೆ ಮುಂದಿಟ್ಟಿದ್ದಾರೆ.

ರಾಜ್ಯದಲ್ಲಿ ಶೇ 90 ರಷ್ಟು ಮುಸ್ಲಿಮರಿದ್ದಾರೆ. ಅದರಲ್ಲಿ ಶೇ 88 ರಷ್ಟು ಮುಸ್ಲಿಮರು ಕಾಂಗ್ರೆಸ್ (Congress) ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಹೇಳಿದರು.

ಅದೇ ರೀತಿ 224 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಮುಸ್ಲಿಮರು ಎಲೆಕ್ಷನ್​ಗೆ ನಿಂತಿದ್ದರು. ಅದರಲ್ಲಿ 9 ಜನರು ಗೆದ್ದಿದ್ದಾರೆ. ಮಾತ್ರವಲ್ಲದೆ, ರಾಜ್ಯದಲ್ಲಿ 73 ಶಾಸಕರು ಗೆಲ್ಲಲು ಮುಸ್ಲಿಮರು ಪ್ರಮುಖ ಪಾತ್ರವಹಿಸಿದ್ದಾರೆ , ನಾವು ಕೂಡ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಲು ಎಲ್ಲಾ ಮಸೀದಿಗಳಲ್ಲಿ ಅಭಿಯಾನ, ಜಾಗೃತಿ ಮಾಡಿದ್ದೆವು ಎಂದು ತಿಳಿಸಿದರು.

ಈ ಹಿಂದೆ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದಿಂದ ಆಯ್ಕೆಯಾದ ಐದು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಹಾಗಾಗಿ ಈ ಬಾರಿಯ ಸರ್ಕಾರದಲ್ಲೂ ಐವರಿಗೆ ಸಚಿವ ಸ್ಥಾನ ಮತ್ತು ಒಂದು ಡಿಸಿಎಂ ಹುದ್ದೆ ನೀಡಬೇಕು. ನಾವು ಮುಖ್ಯಮಂತ್ರಿ ಸ್ಥಾನ ಕೇಳುತ್ತಿಲ್ಲ, ಕರ್ನಾಟಕ ಇತಿಹಾಸದಲ್ಲಿ ಮುಸ್ಲಿಂ ಮುಖ್ಯಮಂತ್ರಿ ಆಗಿಲ್ಲ ಎಂದರು.

ನಮ್ಮಲ್ಲಿ ಒಂಬತ್ತು ಜನ ಮುಸ್ಲಿಂ ಶಾಸಕರಿದ್ದಾರೆ ಅದರಲ್ಲಿ ಯಾರು ಸೂಕ್ತ ಎಂದು ನೋಡಿಕೊಂಡು ಕಾಂಗ್ರೆಸ್ ಪಾರ್ಟಿ ಡಿಸಿಎಂ ಸ್ಥಾನ ನೀಡಲಿ. ಒಂಬತ್ತು ಜನರಲ್ಲಿ ಯಾರಿಗಾದರೂ ಕೊಡಲಿ ಎಂದು ಆಗ್ರಹ ಮಾಡುತ್ತೇವೆ. ಹಳೆ ಮೈಸೂರು ಭಾಗದಲ್ಲಿ ಎಲ್ಲಾ ಮುಸ್ಲಿಂ ಮುಖಂಡರು ಜೆಡಿಎಸ್​ ಪಕ್ಷಕ್ಕೆ ಹೋಗಿದ್ದರು. ಆದರೂ ಮುಸ್ಲಿಮರು ಶೇ 88 ರಷ್ಟು ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ವೋಟ್ ಹಾಕಿದ್ದಾರೆ ಎಂದರು. ಹಿಜಾಬ್ ಮತ್ತು ಸಾಕಷ್ಟು ವಿಚಾರದಲ್ಲಿ ಮುಸ್ಲಿಮರು ಭಯಬೀತರಾಗಿದ್ದರು. ಆ ಹಿನ್ನೆಲೆಯಲ್ಲಿ ಎಲ್ಲಾ ಮುಸ್ಲಿಮರು ಕಾಂಗ್ರೆಸ್ ಪಾರ್ಟಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!