Wednesday, August 10, 2022

Latest Posts

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಸಚಿವ ವಿ. ಸುನೀಲ್ ಕುಮಾರ್ ಕಂಬನಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಉಡುಪಿ:

ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಲೋಕಸಭಾ ಸದಸ್ಯರಾಗಿ, ರಾಜ್ಯ ಸಭಾ ಸದಸ್ಯರಾಗಿ ಅವರು ಸಲ್ಲಿಸಿದ ಸೇವೆ ಅನನ್ಯವಾದುದು. ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಸ್ಕರ್ ಫೆರ್ನಾಂಡಿಸ್ ಉಡುಪಿಯಲ್ಲಿ ಹುಟ್ಟಿ, ನಂತರ ರಾಷ್ಟ್ರ ಮಟ್ಟದ ನಾಯಕರಾಗಿ ಬೆಳೆದದ್ದು ಒಂದು ಸಾಹಸಗಾಥೆ. ಅವರ ನಿಧನದಿಂದ ರಾಜ್ಯ ಮತ್ತು ರಾಷ್ಟ್ರ ಒಬ್ಬ ಅತ್ಯುತ್ತಮ ಜನನಾಯಕ ನನ್ನ ಕಳೆದುಕೊಂಡಿದೆ.
ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಚಿವ ಸುನೀಲ್ ಕುಮಾರ್ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss