ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ದುರಂತ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ.
ಹೊಳಲ್ಕೆರೆ ತಾಲ್ಲೂಕಿನ ಕುನಗಲಿ ಗ್ರಾಮದ ಬಸವರಾಜಪ್ಪ (45) ಮೃತದುರ್ದೈವಿ.
ಶಿವಮೊಗ್ಗ ಕಡೆಯಿಂದ ಹೊಳಲ್ಕೆರೆ ಮಾರ್ಗವಾಗಿ ಬರುತ್ತಿದ್ದ ಕಾರು ಹೊಳಲ್ಕೆರೆ ಕಡೆಯಿಂದ ಕುನಗಲಿಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಬಸವರಾಜಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಕೃಷ್ಣಬೈರೇಗೌಡರ ಪಿಎ ಕಾರು ಅಪಘಾತ ಮಾಡಿದೆ ಎಂದು ಹೇಳಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.