ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದೇ ಪದೇ ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಬಗ್ಗೆ ಟೀಕಿಸುತ್ತಾ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಉದ್ಯಮಿ ಮೋಹನದಾಸ್ ಪೈ ವಿರುದ್ಧ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೈ ನಗರದ ವ್ಯವಸ್ಥೆ, ಸುಧಾರಣೆ ಬಗ್ಗೆ ಸಲಹೆ ನೀಡಲಿ. ಅದು ಬಿಟ್ಟು ಸಂಚಾರ ಸಮಸ್ಯೆ ಬಗ್ಗೆ ಟೀಕಿಸೋದಲ್ಲ. ಅವರು ಕೂಡ ಬೆಂಗಳೂರಿನಿಂದಲೇ ಲಾಭ ಮಾಡಿಕೊಂಡಿರೋರು. ಈಗ ಅವರು ಇಲ್ಲಿಂದ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗಲು ತಯಾರಿಲ್ಲ’ ಎಂದರು.
ಮೋದಿ ಸರ್ಕಾರ ಏನು ಮಾಡಿದ್ರು ಸರಿ, ಸಿದ್ದರಾಮಯ್ಯ ಸರ್ಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವುದಲ್ಲ. ಇಂತಹ ಟೀಕೆಗಳಿಂದ ಪೈ ದೊಡ್ಡ ಮನುಷ್ಯ ಆಗೋದಿಲ್ಲ ಎಂದರು.
ಸಂಚಾರ ದಟ್ಟಣೆ ಸಮಸ್ಯೆ ಇರೋದು ಕೇವಲ ಬೆಂಗಳೂರಿನ ಸಮಸ್ಯೆ ಅಲ್ಲ, ಸ್ಯಾನ್ ಫ್ರಾನ್ಸಿಸ್ಕೊ, ಲಂಡನ್, ಚೆನ್ನೈ, ಎಲ್ಲ ಕಡೆಗಳಲ್ಲೂ ಈ ಸಮಸ್ಯೆಯಿದೆ. ಈ ಬಗ್ಗೆ ಪೈ ಯಾಕೆ ಮಾತನಾಡುವುದಿಲ್ಲ? ಎಂದು ಪ್ರಶ್ನೆ ಹಾಕಿದರು.