ಹೊಸದಿಗಂತ ವರದಿ ಕಲಬುರಗಿ:
ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಜನಾನುರಾಗಿ, ಸಹಕಾರಿ ಧುರೀಣ ಹಾಗೂ ಮಾಜಿ ಸಚಿವರಾದ ಡಾ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀಯುತ ನಿಧನದಿಂದಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಒಬ್ಬ ಧೀಮಂತ ನಾಯಕ ಹಾಗೂ ಹೋರಾಟಗಾರರನ್ನು ಕಳೆದುಕೊಂಡಂತಾಗಿದೆ. ಹೈದರಾಬಾದ್ ಉಸ್ಮಾನಿಯ ವಿವಿಯಲ್ಲಿ ಕಾನೂನು ಪದವಿ ಪಡೆದ ನಂತರ ಭಾಲ್ಕಿಯಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು, ಸಾರ್ವಜನಿಕ ಕ್ಷೇತ್ರ, ಸಹಕಾರಿ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರ ಸಾಧನಗೈದಿದ್ದರು.
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿಯೂ ಕೂಡಾ ಕಾರ್ಯನಿರ್ವಹಿಸಿ ಸಮಾಜದ ಏಳಿಗೆಗೆ ತಮ್ಮ ಅಪಾರ ಕೊಡುಗೆ ನೀಡಿದ್ದಾರೆ. ಗೌರವಾನ್ವಿತ ರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


