Sunday, December 3, 2023

Latest Posts

ಬಸವೇಶ್ವರರ ಭಾವಚಿತ್ರಕ್ಕೆ ಅಪಮಾನ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ- ಸಚಿವ ಪ್ರಿಯಾಂಕ್ ಖರ್ಗೆ

ಹೊಸದಿಗಂತ ವರದಿ ಕಲಬುರಗಿ:

ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಎಸಗಿರುವ ಘಟನೆ ನಡೆದಿದ್ದು, ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಕಾರ್ಯಪ್ರವೃತ್ತರಾಗಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಜಿಲ್ಲಾ ಉಸ್ತುವಾರಿ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸೋಮವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿ ಕಲೆಹಾಕಲಾಗಿದ್ದು ತನಿಖೆ ಪೂರ್ಣಗೊಳ್ಳುವ ಹಂತದಲ್ಲಿದೆ. ತಪ್ಪಿತಸ್ಥರು ಯಾರೇ ಇರಲಿ ಅವರಿಗೆ ಕಾನೂನಿನ ಅಡಿಯಲ್ಲಿ ತಕ್ಕ ಶಿಕ್ಷೆಗೆ ಗುರಿಪಡಿಸಲು ನಾವು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.

ಬಿಜೆಪಿಗೆ ಟಾಂಗ್

ಇದೇ ವಿಚಾರವಾಗಿ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆಗೆ ಇಳಿದಿರುವ ಬಿಜೆಪಿ ನಾಯಕರು ಇದೇ ಆವೇಶವನ್ನು ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಬಸವಣ್ಣನವರ ಪಠ್ಯವನ್ನು ಕೈಬಿಟ್ಟು ಅವಮಾನ ಮಾಡಿದಾಗ ತೋರಿದಿದ್ದರೆ ಇಂದು ಬೀದಿಯಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗುತ್ತಿರಲಿಲ್ಲವೇನೋ ? ಎಂದು ಸಚಿವರು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!