ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕಿಡಿಕಾರಿದ್ದಾರೆ.
ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿರುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ನೀಡಿದ್ದ ಬಿಸ್ವಾ , ಎಐಸಿಸಿ ಅಧ್ಯಕ್ಷರ ಪುತ್ರ ಪ್ರಿಯಾಂಕ್ ಖರ್ಗೆ ‘ಫಸ್ಟ್ ಕ್ಲಾಸ್ ಈಡಿಯಟ್’ ಎಂದು ಕರೆದಿದ್ದಾರೆ.
ಈ ರೀತಿಯ ಹೇಳಿಕೆಗಳು ತೀವ್ರ ಅವಮಾನಕಾರಿ ಮತ್ತು ಅಪಹಾಸ್ಯಕರವಾಗಿವೆ. ಅಸ್ಸಾಂ ಯುವಕರ ಶ್ರಮ ಮತ್ತು ಪ್ರತಿಭೆಯನ್ನು ತೀವ್ರವಾಗಿ ಅವಹೇಳನ ಮಾಡುವಂತಿವೆ. ಅಸ್ಸಾಂನಲ್ಲಿ ಪ್ರತಿಭಾವಂತ ಯುವಕರು ಇಲ್ಲ ಎಂದು ಅವರು ಹೇಳಿರೋದು ಅಸ್ಸಾಂ ಯುವಜನರಿಗೆ ಮಾಡಿದ ಅವಮಾನ. ಹೀಗಾಗಿ ಪ್ರಿಯಾಂಕ್ ವಿರುದ್ಧ ನಾವು ಪ್ರಕರಣ ದಾಖಲಿಸಬಹುದು ಎಂದು ಅವರು ತಿಳಿಸಿದ್ದಾರೆ
ಪ್ರಿಯಾಂಕ್ ಖರ್ಗೆ ಹೇಳಿಕೆ ಏನಾಗಿತ್ತು?
ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿರುವ ತೀರ್ಮಾನವನ್ನು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದರು. ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್‌ಗೆ ಏಕೆ ಹೋಗುತ್ತಿವೆ? ಅವುಗಳು ವಾಸ್ತವದಲ್ಲಿ ಬಯಸಿರೋದು ಬೆಂಗಳೂರನ್ನು. ಆದರೆ ಕರ್ನಾಟಕಕ್ಕೆ ಬರಬೇಕಾದ ಹೂಡಿಕೆಗಳನ್ನು ಕೇಂದ್ರ ಸರ್ಕಾರ ಗುಜರಾತ್‌ಗೆ ತಿರುಗಿಸುತ್ತಿದೆ. ಗುಜರಾತ್ ಮತ್ತು ಅಸ್ಸಾಂನಲ್ಲಿ ಏನಿದೆ? ಅಲ್ಲಿ ಪ್ರತಿಭೆಗಳು ಇವೆಯೇ ಎಂದು ಪ್ರಶ್ನಿಸಿದ್ದರು.

