ಉದ್ಯಮಿ ರತನ್ ಟಾಟಾ ನಿಧನಕ್ಕೆ‌ ಸಚಿವ ಪ್ರಿಯಾಂಕ್ ಖರ್ಗೆ ಕಂಬನಿ

ಹೊಸದಿಗಂತ ಕಲಬುರಗಿ:

ದೇಶ ಕಂಡ ಮಹಾನ್ ಉದ್ಯಮಿ ಟಾಟಾ ಸಮೂಹದ ಮುಖ್ಯಸ್ಥರಾದ ರತನ್‌ ಟಾಟಾ ಅವರ ನಿಧನದ ಸುದ್ದಿ ತಿಳಿದು ಅತೀವ ಬೇಸರವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಂಬನಿ ಮಿಡಿದಿದ್ದಾರೆ.

ಶಿಕ್ಷಣ, ವೈದ್ಯಕೀಯ ಮತ್ತು ಗ್ರಾಮೀಣಾಭಿವೃದ್ಧಿಯ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿ,ಭಾರತದ ಉದ್ಯಮ ವಲಯವನ್ನು ಜಗದೆತ್ತರಕ್ಕೆ ಕೊಂಡೊಯ್ದು ದೇಶದ ಕೀರ್ತಿ ಪತಾಕೆಯನ್ನು ಎಲ್ಲೆಡೆ ಪಸರಿಸಿದ್ದು, ಸಮಾಜಕ್ಕಾಗಿ ಮಹತ್ತರ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ಪದ್ಮವಿಭೂಷಣ, ಪದ್ಮಭೂಷಣ ಸೇರಿದಂತೆ ಹಲವು ಸನ್ಮಾನಗಳು ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಇವರಿಗೆ ಸಂದಿವೆ.ರತನ್‌ ಟಾಟಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸುತ್ತೇನೆ ಎಂದು ಖರ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here