ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಹಾಸನ:
ಕಂದಾಯ ಸಚಿವ ಆರ್.ಆಶೋಕ್ ಹಾಗೂ ಅಬಕಾರಿ ಸಚಿವರು ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಶನಿವಾರ ಸಕಲೇಶಪುರ ತಾಲ್ಲೂಕಿಗೆ ಭೇಟಿ ನೀಡಿ ಅತಿವೃಷ್ಠಿ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿ ಸಾರ್ವಜನಿಕರ ಅಹವಾಲು ಆಲಿಸಿದರು.
ಸಕಲೇಶಪುರ ತಾಲ್ಲೂಕಿನ ದೊಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್ 75 ಯಲ್ಲಿ ಆಗಿರುವ ಭೂ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಆದಷ್ಟು ಶೀಘ್ರವಾಗಿ ರಸ್ತೆ ದುರಸ್ತಿ ಪಡಿಸುವಂತೆ ಸೂಚಿಸಿದರು.
ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ,ಶಾಸಕ ಹೆಚ್.ಕೆ ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ತುತ್ತಾಗಿ ದುರಸ್ತಿ ಕಾಮಾಗಾರಿ ನೆಡೆಸಿ ಆದಷ್ಟು ಬೇಗ ಸಂಚಾರ ಮುಕ್ತರನ್ನಾಗಿಸುವಂತೆ ಸೂಚನೆ ನೀಡಿದರು.
ಕಾಮಗಾರಿ ಮಾಡುವ ಸಂದರ್ಭದಲ್ಲಿಯೇ ಮಜಾಗ್ರತೆ ವಹಸಿಬೇಕಿತ್ತು .ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ಆದಷ್ಟು ಶೀಘ್ರವಾಗಿ ಪೂರ್ಣ ಗೊಳಿಸುವಂತೆ ಸೂಚಿಸಿದರು.