Thursday, December 25, 2025

ಮೃತ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ವಿತರಿಸಿದ ಸಚಿವ ರಾಮಲಿಂಗಾ ರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆ’ಯ ಅಡಿಯಲ್ಲಿ ಕರ್ತವ್ಯದ ವೇಳೆ ಮೃತಪಟ್ಟ ಮೂವರು ಕೆಎಸ್ಆರ್’ಟಿಸಿ ಸಿಬ್ಬಂದಿಯ ಕುಟುಂಬಕ್ಕೆ ತಲಾ ರೂ.1 ಕೋಟಿ ಪರಿಹಾರ ನೀಡಿರುವುದಾಗಿ ಸಾರಿಕೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 3.10 ಕೋಟಿ ಪರಿಹಾರ ಹಾಗೂ ಇಬ್ಬರು ಅವಲಂಬಿತರಿಗೆ ರೂ.14 ಲಕ್ಷದಂತೆ ರೂ.28 ಲಕ್ಷ ನೀಡಲಾಯಿತು. ಒಟ್ಟು 183 ಉದ್ಯೋಗಿಗಳಿಗೆ 18.38 ಕೋಟಿ ರೂ.ಗಳ ಸಹಾಯವನ್ನು ನೀಡಲಾಯಿತು ಎಂದು ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಈ ಮೊತ್ತವನ್ನು ವಿತರಣೆ ಮಾಡಿದರು.

error: Content is protected !!