January 30, 2026
Friday, January 30, 2026
spot_img

ಸಾರಿಗೆ ಬಸ್ಸುಗಳ ಮೇಲಿನ ತಂಬಾಕು ಉತ್ನನ್ನಗಳ ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸಾರಿಗೆ ನಿಗಮದ ನಾಲ್ಕು ಬಸ್ಸು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ಜಾಹೀರಾತನ್ನು ನಿಷೇಧಿಸಿ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ.

ಇಂದು ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಟಿಪ್ಪಣಿ ಹೊರಡಿಸಿರುವ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ, ಈ ಕೂಡಲೇ ಜಾರಿಗೆ ಬರುವಂತೆ, ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ, ಬಸ್‌ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪುಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ಸೂಚಿಸುತ್ತಿದ್ದೇನೆ ಎಂದಿದ್ದಾರೆ.

ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್ಸುಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡುವುದು ಎಂಬುದಾಗಿ ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಆದೇಶ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !