ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ʻಕ್ವಾಡ್ʼ ವಿದೇಶಾಂಗ ಸಚಿವರ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಭಾಗವಹಿಸಿದ್ದರು
ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕದ ವಿದೇಶಾಂಗ ಸಚಿವರೊಂದಿಗೆ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ವಾಡ್ ಸಭೆ ಇದಾಗಿದೆ.
ಇದೇ ವೇಳೆ ಟ್ರಂಪ್ ಆಡಳಿತದಲ್ಲಿ ಹೊಸದಾಗಿ ನೇಮಕಗೊಂಡ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕ್ ವಾಲ್ಟ್ ಅವರೊಂದಿಗೆ ಸಭೆ ನಡೆಸಿದರು. ಜೊತೆಗೆ ಕ್ವಾಡ್ ಸಭೆ ಆಯೋಜಿಸಿದ್ದಕ್ಕಾಗಿ ರೂಬಿಯೊ ಅವರಿಗೆ ಧನ್ಯವಾದ ತಿಳಿಸಿದರು.